.jpg)
MANGALURU: ಒಂದೇ ಕಡೆ ನೆಲೆವೂರಿದ್ದ ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ!!
Thursday, June 19, 2025
ಹಲವಾರು ವರ್ಷಗಳಿಂದ ಒಂದೇ ಕಡೆ ತಳ ಊರಿದ್ದ ಸಿಬ್ಬಂದಿಗಳ ಸ್ಥಳಾಂತರ ವನ್ನ ಮಾಡಲಾಗಿದೆ.ಭಾರೀ ವರ್ಷಗಳಿಂದ ಒಂದೇ ಕಡೆ ಇದ್ದವರನ್ನ ವರ್ಗಾವಣೆಗೆ ಮಾಡಲು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮುಖಂಡರು ಒತ್ತಾಯಿಸಿದ್ದು, ಈ ಬಗ್ಗೆ ಕ್ರಮಕೈಗೊಳ್ಳಲು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅದರ ಭಾಗವಾಗಿ ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದ್ದು ಇನ್ನೂ ನೂರಾರು ಸಂಖ್ಯೆಯಲ್ಲಿ ವರ್ಗಾವಣೆ ಸಾಧ್ಯತೆ ಇದೆ.
ಬಜ್ಪೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿದ್ದ ರಶೀದ್ ಶೇಕ್ ನನ್ನೂ ಮಂಗಳೂರಿನ ಮಹಿಳಾ ಠಾಣೆಗೆ ವರ್ಗಾವಣೆ ಮಾಡಲಾಗದೆ.ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ರಶೀದ್ ಶಾಮೀಲಾಗಿದ್ದರು ಎಂದು ಹಿಂದೂಸಂಘಟನೆಗಳು ಆರೋಪ ಮಾಡಿತ್ತು.