PUTTUR:ಪುತ್ತಿಲ ಪರಿವಾರದವರನ್ನ ತೆರೆಯ ಬದಿಗೆ ಸರಿಸಿ ಬಿಜೆಪಿಗೆ ಹೊಸಬರ ಆಯ್ಕೆ!!
Thursday, November 27, 2025
ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾಗಿ ಸುನೀಲ್ ದಡ್ಡು ಹಾಗೂ ಲೋಕೇಶ್ ಚಾಕೋಟೆ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾಗಿ ಯುವರಾಜ್ ಪೆರಿಯತ್ತೋಡಿ ಹಾಗೂ ಶಶಿಧರ್ ನಾಯಕ್ ಅವರನ್ನ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಇನ್ನು ಪುತ್ತಿಲ ಪರಿವಾರದ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ಹಾಗೂ ನಾಗೇಶ್ ಅವರಿಗೆ ನಗರ ಹಾಗೂ ಗ್ರಾಮಾಂತರ ಮಂಡಲದ ಜವಾಬ್ದಾರಿ ನೀಡಲಾಗಿತ್ತು.
ಆದರೆ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಅವರಿಗೆ ಬಿಜೆಪಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡದ ಕಾರಣಕ್ಕೆ ನಾಲ್ಕು ತಿಂಗಳಿನಿಂದ ಬಿಜೆಪಿ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಗಮಿಸಿದ್ದ ಅಟಲ್ ವಿರಾಸತ್ ಸಮಾವೇಶಕ್ಕೂ ಗೈರಾಗಿದ್ದರು. ಈ ಎಲ್ಲಾ ಆಯಾಮಗಳಿಂದ ಅವರು ಪಕ್ಷದ ಚಟುವಟಿಕೆಯಲ್ಲಿ ನಿಷ್ಕ್ರೀಯಗೊಂಡಿರುವ ಕಾರಣಕ್ಕೆ ನೂತನ ಪ್ರಧಾನ ಕಾರ್ಯದರ್ಶಿಗಳನ್ನ ನೇಮಕ ಮಾಡಲಾಗಿದೆ ಎಂದು ಪುತ್ತೂರು ಬಿಜೆಪಿ ಘಟಕ ತಿಳಿಸಿದೆ.