-->
PUTTUR: ಪುತ್ತೂರಿನ ಜನರಲ್ಲಿ ಆತಂಕ ಸೃಷ್ಟಿಸಿದ ವಿಮಾನ!!

PUTTUR: ಪುತ್ತೂರಿನ ಜನರಲ್ಲಿ ಆತಂಕ ಸೃಷ್ಟಿಸಿದ ವಿಮಾನ!!

 


ಪುತ್ತೂರು: ಪುತ್ತೂರಿನಲ್ಲಿ ಇಂದು ಸಂಜೆ ವಿಮಾನವೊಂದು ಹಲವು ಬಾರಿ ಭೂಮಿ ಮಟ್ಟಕ್ಕೆ ಅತೀ ಸಮೀಪದಲ್ಲಿ ಹಾರಾಟ ನಡೆಸುತ್ತಿದ್ದ ದೃಶ್ಯ ಕಂಡು ಬಂದಿದ್ದು, ಕೆಲ ಕಾಲ ಆತಂಕ ಮೂಡಿದ ಬೆನ್ನಲ್ಲೇ ಇದು ಭೂ ವಿಜ್ಞಾನಕ್ಕೆ ಸಂಬಂಧಿಸಿದ ಸರ್ವೇ ಕಾರ್ಯ ಎಂದು ತಿಳಿದು ಜನರು ನಿಟ್ಟುಸಿರು ಬಿಟ್ಟ ಘಟನೆ ನಡೆದಿದೆ.

ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದ ಗದ್ದೆ ಮೇಲ್ಬಾಗದಲ್ಲಿ ನೆಲ ಮಟ್ಟಕ್ಕೆ ಅತಿ ಸಮೀಪದಲ್ಲಿ ವಿಮಾನ ಹಾರಾಡುತ್ತಿದ್ದ ದೃಶ್ಯವನ್ನು ಜನರು ನೋಡಿದ್ದು, ಪದೇ ಪದೇ ನಗರದ ವಿವಿಧ ಭಾಗದಲ್ಲಿ ಹಾರಾಟ ನಡೆಸಿದೆ. ಸುಮಾರು10 ರಿಂದ 15 ಸುತ್ತು ಹಾರಾಟ ನಡೆಸಿದೆ.

ಏಕಾಏಕಿ ಡ್ರೋಣ್ ಹಾರಾಟ ನಡೆಸುತ್ತಿದ್ದ ದೃಶ್ಯ ಜನರಲ್ಲಿ ಆತಂಕ ಮೂಡಿಸಿತು. ಕೊನೆಗೂ ಇದು ಭೂಮಿಯ ರಚನೆ, ಅಧ್ಯಯನಕ್ಕೆ ಸಂಬಂಧಿಸಿದಂತೆ ನಡೆ ಸರ್ವೆಯಾಗಿದೆ ಎಂಬ ಮಾಹಿತಿ ಲಭಿಸಿದೆ.

ಈ ವಿಮಾನ ಭೂ ಭೌತಿಕ ಸಮೀಕ್ಷೆ ಪಶ್ವಿಮ ಘಟ್ಟ ಪ್ರದೇಶಗಳಲ್ಲಿ ಸಮೀಕ್ಷೆ ಮಾಡುತ್ತಿದ್ದು.ಈ ವಿಮಾನವು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಿತ್ತು. ಖನಿಜ ಸಂಪತ್ತು,  ಭೂಗರ್ಭ ಜಲಸಂಪನ್ಮೂಲ ಚುಂಬಕ ಕ್ಷೇತ್ರದ ಬದಲಾವಣೆಗಳು ಬಗ್ಗೆ ಮಾಹಿತಿ ಸಂಗ್ರಹಿಸಲಿದೆ. ಇದನ್ನು ಕ್ಯಾಲಿಬರ್ ಆ್ಯರ್ ಬೋನ್ ಜಿಯೋ ಫಿಸಿಕ್ಸ್ ಭೂಮಿಯ ಅಡಿ ಭಾಗವನ್ನು ಗಾಳಿಯಿಂದ ಮ್ಯಾಪಿಂಗ್ ಮಾಡುವ ಕ‌ಂಪೆನಿಗೆ ಸೇರಿದ ವಿಮಾನವಾಗಿದೆ.

Ads on article

Advertise in articles 1

advertising articles 2

Advertise under the article